ನಾಡು ಕಂಡ ಅಪರೂಪದ ರಾಜಕಾರಣಿ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ

ಸಂಸತ್ ಸದಸ್ಯರು, ಸ್ಪೀಕರ್, ಕೇಂದ್ರ ಸಚಿವ, ಡೆಪ್ಯುಟಿ ಸಿಎಂ, ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಎಸ್ ಎಂ ಕೃಷ್ಣ ಸೇವೆ..

ProfileImg
11 May '24
1 min read


image

ನಮ್ಮ ನಾಡು ಕಂಡ ಅಪರೂಪದ ರಾಜಕಾರಣಿ ಎಸ್.ಎಂ.ಕೃಷ್ಣ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಸಂಸತ್ ಸದಸ್ಯರು, ಸ್ಪೀಕರ್, ಕೇಂದ್ರ ಸಚಿವ, ಡೆಪ್ಯುಟಿ ಸಿಎಂ, ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದರು. ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಇನ್ನೂ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಇವರು,  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಗೊಂಡರು.

ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್. ಎಂ. ಕೃಷ್ಣ  ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡರು. ನಂತರ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಆಯ್ಕೆಯಾಗಿ, ಉದ್ಯಮ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿದ್ದು, ವಿತ್ತ ಖಾತೆಯ ಸಚಿವರಾಗಿ ಸೇವೆ ನಿರ್ವಹಿಸಿದ್ದಾರೆ.  ವಿಧಾನಸಭೆ ಸ್ಪೀಕರ್ ಆಗಿ ಕೂಡಾ ಕಾರ್ಯ ನಿರ್ವಹಿಸಿದ್ದದಾರೆ.

ಎರಡು ವರ್ಷಗಳ ಕಾಲ ಕರ್ನಾಟಕದ ಉಪಮುಖ್ಯಮಂತ್ರಿಯಾಗಿಯೂ ಕೆಲಸ ನಿರ್ವಹಿಸಿದ್ದ ಇವರು, ಇನ್ನೂ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ 16 ನೇ ಮುಖ್ಯಮಂತ್ರಿಯಾಗಿ ಹಲವು ಮಹತ್ತರ ಬದಲಾವಣೆಗೆ ಕಾರಣಕರ್ತರಾಗಿದ್ದರು.

ರಾಜ್ಯದಲ್ಲಿ ಧರ್ಮಸಿಂಗ್‌ ನೇತೃತ್ವದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ರಚನೆಯಾಗುತ್ತಿದ್ದಂತೆ ಕೃಷ್ಣ ಅವರನ್ನು ಮಹಾರಾಷ್ಟ್ರ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ಪುನಃ 2008 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೃಷ್ಣ ಅವರು 2009 ರಲ್ಲಿ ವಿದೇಶಾಂಗ ಸಚಿವರಾಗಿ 2012ರ ವರೆಗೂ ಕೆಲಸ ನಿರ್ವಹಿಸಿದರು. 

ನಂತರ, 2017 ರಲ್ಲಿ ಕಾಂಗ್ರೆಸ್ ಪಕ್ಷವನ್ನ ತ್ಯಜಿಸಿ, ಬಿಜೆಪಿ ಪಕ್ಷವನ್ನ ಸೇರ್ಪಡೆಯಾದರು.

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ಅವರು ಹೇಳಿದ್ದು, ನನಗೀಗ 90 ವರ್ಷ ವಯಸ್ಸು ಆಗಿದ್ದು, ಇದರ ಅರಿವು ನನಗಿದೆ. 90 ವರ್ಷದ ನಾನು 50 ವರ್ಷದವನಂತೆ ನಟಿಸಲು ಸಾಧ್ಯವಿಲ್ಲ. ಆದ್ದರಿಂದ ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ ಎಂದು ಎಸ್.ಎಂ ಕೃಷ್ಣ ತಿಳಿಸಿದ್ದರು. 

ಇದೀಗ ವಯೋಸಹಜ ಅನಾರೋಗ್ಯದಿಂದ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಎಂ ಕೃಷ್ಣ ಅವರು ಬೇಗ ಹುಷಾರಾಗಲಿ ಎಂದು ಪ್ಥಾರಾರ್ಥಿಸೋಣ..

 




ProfileImg

Written by Avinash deshpande

Article Writer, Self Employee