ಮಸ್ಕಿ ಪಟ್ಟಣದ ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕ ದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಪರಿಸರ ದಿನ: ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5ರಂದು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP)ದ ಅಡಿಯಲ್ಲಿ ಆಯೋಜಿಸಲ್ಪಟ್ಟಿದೆ. ಪರಿಸರ ದಿನವನ್ನು ಆಧುನಿಕ ಪ್ರಪಂಚದ ಪರಿಸರ ವಿಪತ್ತುಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲು ತೀರ್ಮಾನಿಸಲಾಯಿತು. ಸುಸ್ಥಿರ ಜೀವನಶೈಲಿಯನ್ನು ಬದುಕಲು ಜನರನ್ನು ಪ್ರೋತ್ಸಾಹಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದ್ದು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.ಪ್ರತಿ ಶಾಲಾ ಕಾಲೇಜು ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ಹೆಚ್ಚು ಹೆಚ್ಚು ಬೆಳಸುವುದು ಮತ್ತು ಅವುಗಳ ಸಂರಕ್ಷಣೆ ಮಾಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ. ಇಂತಹ ಸೇವೆಯನ್ನು ಪ್ರತಿನಿತ್ಯ ಮಾಡುವ ವನಸಿರಿ ಫೌಂಡೇಶನ್ ಕಾರ್ಯವು ಬಿಸಿಲು ನಾಡು ರಾಯಚೂರು ಜಿಲ್ಲೆಯನ್ನು ಹಸಿರುಮಯ ಮಾಡಲು ಪ್ರಯತ್ನಿಸುತ್ತಿದೆ ಅವರಿಗೆ ನಮ್ಮೆಲ್ಲರ ಬೆಂಬಲ ಮತ್ತು ಪ್ರೋತ್ಸಾಹ ಮಾಡುವಲ್ಲಿ ಮುಂದಾಗೋಣ..
ಶಾಲೆಯ ಮುಖ್ಯೋಪಾಧ್ಯಾಯರಾದ ಶರಣೇಗೌಡ ಪಾಟೀಲ ಸಸಿ ನೆಟ್ಟು, ಮಾತನಾಡಿ ನಗರೀಕರಣದಿಂದ ಮನುಷ್ಯ ಗಿಡಮರಗಳನ್ನು ಹೆಚ್ಚು ಹೆಚ್ಚು ಕಡಿಯುತ್ತಿದ್ದಾನೆ. ಗಿಡಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಇದರಿಂದ ಜಾಗತಿಕ ತಾಪಮಾನದಲ್ಲಿ ಏರುಪೇರಗಳಾಗುತ್ತಿವೆ. ಜಾಗತಿಕ ತಾಪಮಾನದ ಪ್ರಕಾರ ನಾವುಗಳೆಲ್ಲರೂ 10ಲಕ್ಷಕ್ಕೂ ಹೆಚ್ಚು ಗಿಡಮರಗಳನ್ನು ಬೆಳಸಬೇಕಾಗಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸ ್ಕಾರದಿಂದ ರಾಜ್ಯ ಪರಿಸರ ಪ್ರಶಸ್ತಿ ಪಡೆದ ವನಸಿರಿ ಫೌಂಡೇಶನ್ ಸಂಸ್ಥ ಪಕ ಅಮರೇಗೌಡ ಮಲ್ಲಾಪುರ ಅವರ ತಂಡವು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು,ಪರಿಸರ ಪ್ರೇಮಿಗಳು ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸಿ ಪರಿಸರವನ್ನು ಉಳಿಸಿ ಬೆಳಸಲು ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಸ್ಕಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ಅಧ್ಯಕ್ಷರಾದ ರಾಜು ಪತ್ತಾರ ಬಳಗಾನೂರ,ನಂದಿ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ರವಿಕುಮಾರ ಅಚ್ಚಪ್ಪನವರ್, ಅಮರೇಗೌಡ ಪಾಟೀಲ, ನಾಗರಾಜ ಸ್ಥಾವರಮಠ, ಅಂಬಿಕಾ ಪಾಟೀಲ, ಶರಣಮ್ಮ,ಆಸ್ಮಾ ಬೇಗಂ, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Article Writer, Self Employee