ಭಗವದ್ಗೀತೆ ಯಾಕೆ ಓದಬೇಕು?

ಭಗವದ್ಗೀತೆ

ProfileImg
13 May '24
5 min read


image

ಭಗವದ್ಗೀತೆ ವ್ಯಾಸರು ರಚಿಸಿರುವ ಮಹಾಭಾರತದˌಭೀಷ್ಮಪರ್ವದ ಒಂದು ಭಾಗ ಅದರಲ್ಲಿ ಏನಿದೆˌನಾವು ಭಾವಿಸುವ ಅಂಶಗಳೇನುˌಕೃಷ್ಣ ಅರ್ಜುನ ಒಂದಷ್ಟು ಮಾತಡಿಕೊಂಡರು! ಅಷ್ಟಕೆ ಮುಗೀಯುವ ವಿಷಯವೆˌಇಲ್ಲಿ ಪ್ರತಿಯೊಂದು ಅಧ್ಯಾಯವನ್ನು ಒಂದೊಂದು ಯೋಗವೆಂದು ಕರೆಯುತ್ತಾರೆ.ಅದರಲ್ಲಿ ಕರ್ಮಯೋಗ ತೆಗೆದುಕೊಂಡರೆˌ ನ ಹಿ ಕಶ್ಚಿತ್ ಕ್ಷಣಮಪಿ ಜಾತು ತಿಷ್ಠತ್ಯಕರ್ಮಕೃತ್ |
ಕಾರ್ಯತೇ ಹ್ಯವಶಃ ಕರ್ಮ ಸರ್ವಃ ಪ್ರಕೃತಿಜೈರ್ಗುಣೈಃ ||

ಹುಟ್ಟು ಗುಣಗಳಿಗೆ ಅನುಸಾರವಾಗಿ ಅವಶ್ಯವಾಗಿ ಕರ್ಮವನ್ನು ಎಲ್ಲರೂ ಮಾಡಲೇಬೇಕಾಗುತ್ತದೆ. ಯಾರೊಬ್ಬನೂ ಒಂದು ಕ್ಷಣ ಕೂಡ ಕರ್ಮವನ್ನು ಮಾಡಕ್ಕೆ ಇರಲು ಖಂಡಿತವಾಗಿಯೂ ಸಾಧ್ಯವಿಲ್ಲ

~ "ಶ್ಲೋಕ ೫" - ಅಧ್ಯಾಯ ೩ - ಕರ್ಮ ಯೋಗ ಎಂಬ ಮಾತು ಬರುತ್ತದೆˌಅದರ ಅರ್ಥವೇನುˌನಾವು ಏನಾದರು ಮಾಡುವುದಕ್ಕೆ ಬಂದವರುˌಸುಮ್ಮನೆ ಇದ್ದು ಹೋಗುವುದಕ್ಕೆˌಬಂದವರಲ್ಲ ಎಂಬ ಎಚ್ಚರಿಕೆಯನ್ನ ನಮಗೆ ಕೊಡುತ್ತೆˌ.ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ |
ಮಾ ಕರ್ಮಫಲಹೇತುರ್ಭೂರ್ಮಾ ತೇ ಸಂಗೋಸ್ತ್ವಕರ್ಮಣಿ ||೪೭||ಎಂಬುದನ್ನು  ಅಂದರೆ:ನಿನಗೆ ನಿನ್ನ ಕರ್ಮ ಮಾಡುವುದರಲ್ಲಿ ಮಾತ್ರ ಅಧಿಕಾರವಿದೆ, ಅದರ ಫಲದಲ್ಲಿ ಇಲ್ಲ. ಆದ್ದರಿಂದ ಮಾಡಿದ ಕೆಲಸಕ್ಕೆ ಪ್ರತಿಫಲಾಪೇಕ್ಷಿಯಾಗಿ ಫಲಕ್ಕೆ ಕಾರಣನೂ ನೀನೆಂದುಕೊಳ್ಳಬೇಡ ಮತ್ತು ಕರ್ಮಮಾಡದೇ ಜೀವಿಸಬೇಕೆಂಬ ಹಂಬಲ ನಿನ್ನಲ್ಲಿ ಹುಟ್ತದಿರಲಿ. ಹಾಗೆ ಗೆಲವು-ಸೋಲುಗಳಿಗೆ ಕುಂದದೆ ಎರಡನ್ನೂ ಸಮಾನಚಿತ್ತದಿಂದ ಸ್ವೀಕರಿಸುತ್ತ ನಿನ್ನ ಕರ್ತವ್ಯಗಳನ್ನು ಮಾಡು.ಇದು ಒಳ್ಳೆ ಕಥೆಯಾಯ್ತುˌಫಲದ ಬಯಕೆ ಇಲ್ಲದೆ ಯಾರುˌಯಾವ ಕೆಲಸ ಮಾಡಲು ಸಾಧ್ಯˌಅದನ್ನ ಬನ್ನಂಜೆಗೋವಿಂದಚಾರ್ಯರುˌತುಂಬಾ ಚೆನ್ನಾಗಿ ವಿವರಣೆ ಮಾಡ್ತಾರೆˌಪರೀಕ್ಷೆಯಲ್ಲಿ ಪಾಸ್ ಆಗಬೇಕು ಅಂತ ಓದಬೇಕುˌಆದರೆ ಎಲ್ಲದರಲ್ಲು ನೂರಕ್ಕೆ ನೂರು ಪಡೆಯಬೇಕುˌಎಂದುಕೊಂಡರೆ ಅಷ್ಟು ಸುಲಭವಲ್ಲˌನಮಗೆ ಯಾವುದಾದರೂ ಒಂದು ಪ್ರಶ್ನೆಗೂ ಉತ್ತರ ಗೊತ್ತಿಲ್ಲವೆಂದರುˌಗೊತ್ತಿರುವ ಉತ್ತರಗಳು ಬರೆಯುವುದಕ್ಕೆ ಮನಸ್ಸು ಬರುವುದಿಲ್ಲˌನಾವು ಮಾಡುವ ಕೆಲಸ ಹೇಗಿರಬೇಕುˌಅದು ಗೆಲುವು ಕಂಡಾಗˌಅಥವಾ ಸೋಲು ಬಂದಾಗˌನಮ್ಮ ನಡೆಗಳು ಹೇಗಿರಬೇಕು ಅನ್ನುವುದನ್ನˌಗೀತೆ ತಿಳಿಸಿಕೊಡುತ್ತೆ.ಅದರ ಜೊತೆಗೆˌ ಯೋಗಸ್ಥಃ(ಖ್) ಕುರು ಕರ್ಮಾಣಿ, ಸಂಗಂ(ನ್) ತ್ಯಕ್ತ್ವಾ ಧನಂಜಯ
ಸಿದ್ಧ್ಯಸಿದ್ಧ್ಯೋಃ(ಸ್) ಸಮೋ ಭೂತ್ವಾ, ಸಮತ್ವಂ(ಯ್) ಯೋಗ ಉಚ್ಯತೇ ॥2.48.ಎಲೈ ಧನಂಜಯ! ನೀನು ಆಸಕ್ತಿಯನ್ನು ತ್ಯಜಿಸು. ಸಿದ್ಧಿ, ಅಸಿದ್ಧಿಗಳಲ್ಲಿ ಸಮಬುದ್ಧಿಯುಳ್ಳವನಾಗು. ಯೋಗದಲ್ಲಿ ನೆಲೆನಿಂತು ಕರ್ತವ್ಯಕರ್ಮಗಳನ್ನು ಮಾಡು. ಸಮತ್ವವನ್ನೇ ಯೋಗವೆಂದು ಹೇಳಲಾಗುತ್ತದೆ.

ಯೋಗದಲ್ಲಿ ಸ್ಥಿತರಾಗಿ ಕರ್ಮ ಮಾಡಬೇಕು. ನನ್ನ ಕೆಲಸವನ್ನು ಜನ ಮೆಚ್ಚಿಕೊಳ್ತಾರೆ, ನನ್ನನ್ನು ಗುರುತಿಸುತ್ತಾರೆ, ಗೌರವಿಸುತ್ತಾರೆ. ಪ್ರತಿಷ್ಠೆ ಹೆಚ್ಚುತ್ತದೆ - ಎಂದೆಲ್ಲ ಭಾವಿಸಿ ಕೆಲಸ ಮಾಡಬಾರದು. ನಾನು ಮಾಡುವ ಈ ಕೆಲಸ ನನಗೆ ತಕ್ಕುದಾದದ್ದೇ - ಎಂದಷ್ಟೇ ಯೋಚಿಸಿ ಯೋಗ್ಯವಾದುದಾದರೆ ನಿರಪೇಕ್ಷ ಭಾವದಿಂದ ಮಾಡಬೇಕು. ಇದರಿಂದ ಭಗವದ್ಗೀತೆಯನ್ನು ಆಚರಣೆಗೆ ತಂದಂತಾಗುತ್ತದೆ. ಅದರ ಲಾಭವೂ ನಮ್ಮ ಅನುಭವಕ್ಕೆ ಗೋಚರವಾಗುತ್ತದೆ. ಭಗವದ್ಗೀತೆ ಯೋಗ ಶಾಸ್ತ್ರವಾಗಿದೆ. ಶಾಸ್ತ್ರವೆಂದರೆ ವಿಜ್ಞಾನ! ವಿಜ್ಞಾನವು ಎಂದಿಗೂ ಪ್ರಾಯೋಗಿಕವಾಗಿರಬೇಕು. ಅಲ್ಲಿಯತನಕ ಅದು ಶಾಸ್ತ್ರವೆನಿಸಿಕೊಳ್ಳುವುದಿಲ್ಲ.ಶ್ಲೋಕ॥೨೨॥
ವಾಸಾಂಸಿ ಜೀರ್ಣಾನಿ ಯಥಾ ವಿಹಾಯ
ನವಾನಿ ಗೃಹ್ಣಾತಿ ನರೋsಪರಾಣಿ ।
ತಥಾ ಶರೀರಾಣಿ ವಿಹಾಯ ಜೀರ್ಣಾ
ನ್ಯನ್ಯನಿ ಸಂಯಾತಿ ನವಾನಿ ದೇಹೀ॥ ॥೨೨॥
ಅರ್ಥ>ಮನುಷ್ಯನು ಹಳೆಯ ವಸ್ತ್ರಗಳನ್ನು ಬಿಸುಟು ಬೇರೆ ಹೊಸ ವಸ್ತ್ರಗಳನ್ನು ಧರಿಸುವಂತೆಯೇ,ಜೀವಾತ್ಮನು ಹಳೆಯ ಶರೀರಗಳನ್ನು ಬಿಸುಟು ಬೇರೆ ಹೊಸ ಶರೀರಗಳನ್ನು ಪಡೆಯುತ್ತಾನೆ.॥೨೨॥ ನಮ್ಮ ದೇಹ ಶಾಶ್ವತವಲ್ಲವೆನ್ನುವುದನ್ನು ನತೇಷಾಮೇವ ಅನುಕಂಪಾರ್ಥಂ
ಅಹಂ ಅಜ್ಞಾನಜಂ ತಮಃ |
ನಾಶಯಾಮಿ ಆತ್ಮಭಾವಸ್ಥ
ಜ್ಞಾನದೀಪೇನ ಭಾಸ್ವತ ||

[ಭಗವದ್ಗೀತೆ 10.11 - ಭಕ್ತಿಯೋಗ]

(ಜೀವಾತ್ಮನ ಮೇಲಿನ ಕನಿಕರದಿಂದಲೇ ಅವನಲ್ಲಿ ನೆಲೆನಿಂತು, ಅವನ ಹೃದಯದಲ್ಲಿರುವ ಅಜ್ಞಾನಾಂಧಕಾರವನ್ನು ಜ್ಞಾನವೆಂಬ ಪಂಜಿನ ಬೆಳಕಿನಿಂದ ಹೋಗಿಸುತ್ತಿರುವೆˌಅಂದರೆ ಭಗವದ್ಗೀತೆ ಓದುವುದರಿಂದ ನಮ್ಮೊಳಗಿನ ಅಜ್ಞಾನ ಕಡಿಮೆಯಾಗಿˌಜ್ಞಾನ ಜಾಗೃತಿಯಾಗುತ್ತೆ.ಅದರ ಜೊತೆಯಲ್ಲಿ ಪ್ರತಿಯೊಂದು ಅಧ್ಯಾಯದಲ್ಲಿಯೂˌಒಂದೊಂದು ಮಹತ್ತರವಾದ ವಿಚಾರವಿದೆˌಅದನ್ನ ಸಂಕ್ಷಿಪ್ತವಾಗಿ ಹೇಳುವುದಾದರೆˌಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ
ಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ. ಧರ್ಮ ಹಾಳುಗೆಡವಿದ್ದನ್ನು ನೋಡುವುದಕ್ಕಿಂತ ಅವರೆಲ್ಲ ತನ್ನ ಬಂಧುಗಳೇ. ಅವರನ್ನು ಹೇಗೆ ಕೊಲ್ಲುವುದು ಎಂದು ಅರ್ಜುನ ಯೋಚಿಸುತ್ತಿರುತ್ತಾನೆ. ಆದರೆ, ಈ ಯೋಚನೆ ತಪ್ಪು. ಧರ್ಮವು ಈ ಭವಬಂಧನಗಳಿಗಿಂತ ಹೆಚ್ಚು. ತಪ್ಪಾಗಿ ಯೋಚಿಸುವುದರಿಂದ ತಪ್ಪಾದ ತೀರ್ಪು ಹೊರಬರುತ್ತದೆ ಎಂಬುದನ್ನು ಶ್ರೀಕೃಷ್ಣ ವಿವರಿಸುತ್ತಾನೆ. ಆದರೆ, ಅರ್ಜುನನಿಗೆ ಸಮಧಾನವಾಗುವುದಿಲ್ಲ. ಆತ ಗೊಂದಲ ಹಾಗೂ ದುಃಖದಿಂದ ಕುಳಿತುಕೊಳ್ಳುತ್ತಾನೆ.

ಅಧ್ಯಾಯ 2: ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ
ಕೃಷ್ಣನು ಅರ್ಜುನನಿಗೆ ಅವನೆಲ್ಲ ದುಃಖದುಮ್ಮಾನ, ಸಮಸ್ಯೆಗಳಿಗೆ ಅಜ್ಞಾನವೇ ಕಾರಣ ಎಂಬುದನ್ನು ತಿಳಿಸುತ್ತಾನೆ. ಭೀಷ್ಮನಿಂದ ಹಿಡಿದು ಯಾರೊಬ್ಬರ ಆತ್ಮಗಳನ್ನೂ ನಾಶಪಡಿಸಲಾಗುವುದಿಲ್ಲ. ಹಾಗಾಗಿ ಅವರೆಲ್ಲ ಶಾಶ್ವತವಾಗಿರುತ್ತಾರೆ. ಯುದ್ಧವನ್ನು ದೂರವಿಡುವುದರಿಂದ ನಿನ್ನ ಧರ್ಮವನ್ನೇ ದೂರವಿಟ್ಟಂತಾಗುತ್ತದೆ. ಅದು ಪಾಪಕಾರ್ಯ. ಹೋರಾಡದಿದ್ದರೆ ಆತನೊಬ್ಬ ಹೇಡಿ ಎನಿಸಿಕೊಳ್ಳುತ್ತಾನೆ ಎಂದು ಎಚ್ಚರಿಸುತ್ತಾನೆ ಕೃಷ್ಣ.

ಅಧ್ಯಾಯ 3: ಅಭಿವೃದ್ಧಿ ಹಾಗೂ ಬೆಳವಣಿಗೆಗೆ ನಿಸ್ವಾರ್ಥವೊಂದೇ ದಾರಿ
ಕೃಷ್ಣ ಇಲ್ಲಿ ನಿಸ್ವಾರ್ಥ ಸೇವೆಯಾದ ಕರ್ಮಯೋಗದ ಕುರಿತು ಮಾತನಾಡುತ್ತಾನೆ. ಕರ್ಮಯೋಗಿಯು ಧರ್ಮದ ಆಧ್ಯಾತ್ಮಕ್ಕೆ ಬೆಲೆ ಕೊಟ್ಟು ತನ್ನೆಲ್ಲ ಕೆಲಸಗಳನ್ನು ದೇವರಿಗೆ ಸಮರ್ಪಿಸುತ್ತಾನೆ. ಫಲಿತಾಂಶದ ಬಗ್ಗೆ ಯೋಚಿಸದೆ  ತನ್ನ ಪಾಡಿಗೆ ತಾನು ಶಾಂತಚಿತ್ತದಿಂದ ಕೆಲಸ ಮಾಡಿಕೊಂಡು ಹೋಗುತ್ತಾನೆ. ನಮ್ಮ ಆಸೆ, ಸಿಟ್ಟು, ಅತಿಯಾದ ಪ್ರೀತಿಯೇ ನಮ್ಮ ನಿಜವಾದ ಶತ್ರುಗಳು. ಇವು ನಮ್ಮನ್ನು ಸ್ವಾರ್ಥಿಗಳಾಗಿಸಿ ಶಾಂತಿಯನ್ನು ಕಸಿದುಕೊಳ್ಳುತ್ತದೆ ಎಂದು ತಿಳಿಸುತ್ತಾನೆ.

ಅಧ್ಯಾಯ 4: ಧರ್ಮಸಂಸ್ಥಾಪನೆಗೆ ಭಗವಂತ ಅವತಾರ ಎತ್ತುತ್ತಾನೆ
ಧರ್ಮಕ್ಕೆ ಹಾನಿಯಾದಾಗ ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಪ್ರತಿ ಯುಗದಲ್ಲಿ ಭೂಮಿಯಲ್ಲಿ ಅವತರಿಸುತ್ತಾನೆ ಎಂದು ಕೃಷ್ಣ ವಿವರಿಸುತ್ತಾನೆ. ಅಷ್ಟೇ ಅಲ್ಲ, ಭಗವಂತನ ಈ  ಜನ್ಮ ರಹಸ್ಯವನ್ನು ಅರಿತವರು ಮೋಕ್ಷ ಪ್ರದರು ಎಂದು ತಿಳಿಸುತ್ತಾನೆ.

ಅಧ್ಯಾಯ 5: ಅಹಂಕಾರದಿಂದ ಹೊರ ಬಂದು ಫಲದಾಸೆ ಇಲ್ಲದೆ ಕರ್ಮ ಮಾಡು
ಹೇಗೆ ಕರ್ತವ್ಯ ನಿಭಾಯಿಸುತ್ತಲೇ ಫಲದಾಸೆಯಿಲ್ಲದೆ ಸನ್ಯಾಸಿಯಂತಿರುವುದು ಎಂದು ಅರ್ಜುನ ಪ್ರಶ್ನಿಸುತ್ತಾನೆ. ಇದಕ್ಕೆ ಕೃಷ್ಣನು ನಿಜವಾದದ ಕರ್ಮಯೋಗಿಯು ಫಲಿತಾಂಶದ ಬಗ್ಗೆ ಯೋಚಿಸದೆ ಫಲವನ್ನು ದೇವರಿಗೆ ಬಿಟ್ಟು ತಾನು ಕರ್ತವ್ಯ ನಿಭಾಯಿಸುತ್ತಾನೆ. ಈ ಮನಸ್ಥಿತಿಯಿಂದಾಗಿ ಆತ ಸ್ವಯಂ ನಿಯಂತ್ರಣ ಸಾಧಿಸಿ ಅಹಂಕಾರದಿಂದ ಹೊರಬರಬಲ್ಲ ಎಂದು ಹೇಳುತ್ತಾನೆ.

ಅಧ್ಯಾಯ 6: ಧ್ಯಾನಸಾಧಕನಿಗೆ ಕರ್ಮ ಸಾಧನೆ ಸಾಧ್ಯ
ಧ್ಯಾನದ ಕುರಿತು ಇಲ್ಲಿ ಕೃಷ್ಣ ಹೇಳುತ್ತಾನೆ. ಧ್ಯಾನವನ್ನು ಅಭ್ಯಾಸ ಮಾಡುವವನು ಏಕಾಂಗಿಯಾಗಿ, ದೇಹವನ್ನೂ ಮನಸ್ಸನ್ನೂ ಬಿಗಿಹಿಡಿದು, ಮನಸ್ಸನ್ನು ಪರಮಾತ್ಮನಲ್ಲಿ ಕೂಡಿಸಿಕೊಂಡಿರಬೇಕು. ಪ್ರಯತ್ನದಿಂದಲೇ ಇಂದ್ರಿಯಗಳನ್ನೂ, ಮನಸ್ಸನ್ನು ಗೆಲ್ಲಬೇಕು ಎನ್ನುತ್ತಾನೆ.

ಅಧ್ಯಾಯ 7: ನೀನಾರು ಎಂದು ತಿಳಿದುಕೋ. 
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂಬ ತತ್ವ ಬೋಧಿಸುತ್ತಾನೆ.

ಅಧ್ಯಾಯ 8: ಪ್ರಯತ್ನ ಬಿಡಬೇಡ
ದೇವರ ಧ್ಯಾನದಲ್ಲಿ ಪ್ರಾಮಾಣಿಕವಾಗಿ ತೊಡಗಿರುವವನಿಗೆ ದೇವರು ಸಿಕ್ಕೇ ಸಿಗುತ್ತಾನೆ. ಪ್ರಯತ್ನ ಬಿಡಕೂಡದು ಎಂದು ಹೇಳುತ್ತಾನೆ.

ಅಧ್ಯಾಯ 9: ದೇವರ ಧ್ಯಾನದಿಂದ ನನ್ನ ಸೇರಬಹುದು
ಈ ಜಗತ್ತೆಲ್ಲಾ ಕಣ್ಣಿಗೆ ಕಾಣದ ನನ್ನಿಂದ ತುಂಬಿರುವುದು. ಈ ಎಲ್ಲಾ ವಸ್ತುಗಳೂ ನನ್ನಲ್ಲಿ ಇರುವುವು, ಆದರೆ ನಾನು ಅವುಗಳಲ್ಲಿ ಇಲ್ಲ.ಯಾವ ಜನರು, ತಮ್ಮ ಆತ್ಮವೆಂದು ನನ್ನನ್ನು ಧ್ಯಾನ ಮಾಡುತ್ತಾರೋ, ನಾನು ಅವರ ಯೋಗಕ್ಷೇಮ ಹೊರೆ ಹೊರುತ್ತೇನೆ ಎನ್ನುತ್ತಾನೆ.

ಅಧ್ಯಾಯ 10: ಕರ್ಮಕ್ಕೆ ತಕ್ಕ ಫಲ ಪ್ರಾಪ್ತಿ
ಭೂಮಿಯ ಪ್ರತಿಯೊಂದು ಚರಾಚರಗಳಲ್ಲೂ ನಾನಿದ್ದೇನೆ. ನಿನ್ನ ಸುತ್ತಲ ಬದುಕು ಸಂಪೂರ್ಣ ಪವಾಡಗಳಿಂದಲೇ ತುಂಬಿದೆ. ಅವುಗಳನ್ನು ಕಂಡು ಖುಷಿಪಡು. ಜಗತ್ತಿನಲ್ಲಿ ದೇವರಿರುವುದಲ್ಲ, ದೇವರೊಳಗೆ ಸಂಪೂರ್ಣ ಜಗತ್ತಿದೆ. ನಿನ್ನ ಕರ್ಮಕ್ಕೆ ತಕ್ಕ ಫಲವನ್ನು ನಾನು ನೀಡಿಯೇ ತೀರುತ್ತೇನೆ.

ಅಧ್ಯಾಯ 11: ವಿಶ್ವರೂಪ ದರ್ಶನ
ಈಶ್ವರತ್ವದ ರೂಪವನ್ನು ನೋಡುವ ಆಸೆಯನ್ನು ಅರ್ಜುನ ವ್ಯಕ್ತಪಡಿಸುತ್ತಾನೆ. ಇದರಿಂದ ಕೃಷ್ಣನು ತನ್ನ ಆದಿಅಂತ್ಯವಿಲ್ಲದ ಪ್ರಕಾಶಮಾನವಾದ ವಿಶ್ವರೂಪ ದರ್ಶನ ಮಾಡಿಸುತ್ತಾನೆ. ಇದನ್ನು ನೋಡಿ ಅರ್ಜುನ ಬೆರಗಾಗಿ ಶರಣಾಗುತ್ತಾನೆ. ಸತ್ಯವನ್ನು ಅರಿಯದಿದ್ದುದಕ್ಕೆ ಕ್ಷಮೆ ಯಾಚಿಸುತ್ತಾನೆ.

ಅಧ್ಯಾಯ 12: ವೈರಾಗ್ಯದಿಂದ ಧ್ಯಾನಿಸುವವರೇ ಯೋಗಿ
ಯಾರು ಭಗವಂತನಲ್ಲಿ ಹೆಚ್ಚು ಪ್ರೀತಿಯನ್ನಿಟ್ಟು ವಿಶ್ವರೂಪವನ್ನು ಧ್ಯಾನಿಸುತ್ತಾ ಉಪಾಸನೆ ಮಾಡುವರೋ ಅವರು ಹೆಚ್ಚಿನ ಯೋಗಿಗಳು. ವಿವೇಕ ವೈರಾಗ್ಯಗಳಿಂದ ಅದನ್ನು ಅಭ್ಯಾ ಸಮಾಡಬೇಕು. ಅದು ಕಷ್ಟವಾದರೆ, ಭಗವಂತನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡು. ಅದೂ ಕಷ್ಟವಾದರೆ. ಕರ್ಮಗಳ ಫಲಗಳ ಬಯಕೆಗಳನ್ನೆಲ್ಲಾ ಬಿಡು ಎನ್ನುತ್ತಾನೆ.

ಅಧ್ಯಾಯ 13: ಮಾಯೆಯಿಂದ ಕಳಚಿಕೊಂಡು ಭಗವಂತನನ್ನು ಭಜಿಸು
ಈ ಬ್ರಹ್ಮಾಂಡವೇ ಒಂದು ಮಾಯೆ. ಇವೆಲ್ಲದರ ಸೃಷ್ಟಿಕರ್ತ ಬ್ರಹ್ಮನಾಗಿದ್ದು,ಅವನು ಪ್ರತಿಯೊಂದು ಅಣುರೇಣತೃಣಕಾಷ್ಟಗಳಲ್ಲೂ ನೆಲೆಸಿದ್ದಾನೆ. ನಿನ್ನೊಳಗೂ ಆತ ಇರುವುದನ್ನು ಅರ್ಥ ಮಾಡಿಕೊಂಡು ಮಾಯೆಯಿಂದ ಕಳಚಿಕೊಂಡು ಭಕ್ತಿಯಿಂದ ಜೀವಿಸು ಎಂದು ಕೃಷ್ಣ ವಿವರಿಸುತ್ತಾನೆ.

ಅಧ್ಯಾಯ 14: ನಿನ್ನದೃಷ್ಟಿಕೋನಕ್ಕೆ ಹೊಂದುವ ಜೀವನಶೈಲಿ ಅಳವಡಿಸಿಕೋ
ಎಲ್ಲರಲ್ಲೂ ಮೂರು ಗುಣಗಳಿರುತ್ತವೆ. ಸಾತ್ವಿಕ ಗುಣವು ಬೆಳಕಿನ, ಸುಖದ, ವಿಚಾರದ ರೂಪ, ರಜೋಗುಣವು ಪ್ರೀತಿ, ಬಯಕೆ ಅಹಂಕಾರದ ಕ್ರಿಯಾಶೀಲ ರೂಪ, ತಮವು ಅಜ್ಞಾನ, ತಪ್ಪು ತಿಳುವಳಿಕೆ, ಆಲಸ್ಯದ ರೂಪ. ಇವುಗಳಲ್ಲಿ ಶಕ್ತವಾದ ಗುಣ ಆತ್ಮವನ್ನು ಕಟ್ಟಿಹಾಕುತ್ತದೆ. ಎಲ್ಲರಲ್ಲಿಯೂ ಇಷ್ಟೂ ಗುಣಗಳಿದ್ದರೂ ಒಂದು ಗುಣ ಮೇಲುಗೈ ಸಾಧಿಸುವುದು. ಸಾತ್ವಿಕ ಗುಣದವನು ಮೋಕ್ಷ, ರಾಜಸಿಕ ಗುಣದವನು ಪುನರ್ಜನ್ಮ ಹಾಗೂ ತಾಮಸಿಕ ಗುಣದವನು ಕೆಳಮಟ್ಟದ ಜನ್ಮವೆತ್ತುತ್ತಾನೆ ಎಂದು ಕೃಷ್ಣ ಹೇಳುತ್ತಾನೆ.

ಅಧ್ಯಾಯ 15: ದೈವಿಕತ್ವಕ್ಕೆ ಬೆಲೆ ಕೊಡು
ಈ ಪ್ರಾಪಂಚಿಕ ಜೀವನದಲ್ಲಿ ನಾವು ಹೇಗೆ ಸಾವು ಹಾಗೂ ಪುನರ್ಜನ್ಮಗಳ ಮಧ್ಯೆ ಸಿಲುಕಿದ್ದೇವೆ ಎಂಬುದನ್ನು ಕೃಷ್ಣ ಅರ್ಜುನನಿಗೆ ಅರ್ಥ ಮಾಡಿಸುತ್ತಾನೆ. ಆತ ಸಂಸಾರವನ್ನು ತಲೆಕೆಳಗಾದ ಅರಳಿ ಮರಕ್ಕೆ ಹೋಲಿಸಿ ಮಾತನಾಡುತ್ತಾನೆ. ಪಾಪ ಪುಣ್ಯಗಳ ಕರ್ಮಗಳನ್ನು ಅಂಟಿಸುವ ಒಳ ಬೇರುಗಳು ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿದೆ. ಸುಖದ ಬಯಕೆಗಳೆ ಅದರ ಚಿಗುರುಗಳು. ಇದು ಆದಿ ಅಂತ್ಯವಿಲ್ಲದ್ದು. ಇದನ್ನು ವೈರಾಗ್ಯವೆಂಬ ಶಸ್ತ್ರದಿಂದ ಕತ್ತರಿಸಬೇಕು. ದೈವಿಕತ್ವಕ್ಕೆ ಬೆಲೆ ಕೊಟ್ಟಾಗ ಇದು ಸಾಧ್ಯ ಎಂದು ಕೃಷ್ಣ ಮನ ಮುಟ್ಟುವಂತೆ ಹೇಳುತ್ತಾನೆ.  

ಅಧ್ಯಾಯ 16 : ಉತ್ತಮನಾಗಿರುವುದೇ ವರ
ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ.

ಅಧ್ಯಾಯ 17: ಮೇರು ಸತ್ಯ
ಇಲ್ಲಿ ಕೃಷ್ಣ ಓಂ ತತ್ ಸತ್ ಮಂತ್ರದ ಮಹತ್ವ ಹೇಳುತ್ತಾನೆ. ಇದರ ಅರ್ಥ ಮೇರು ಸತ್ಯ ಎಂದು. ಓಂನಾಮದಿಂದಲೇ ಸತ್ಕಾರ್ಯ ಆರಂಭಿಸಬೇಕು. ಯಜ್ಞ, ದಾನ ಹಾಗೂ ತಪಸ್ಸು ಸತ್ಕಾರ್ಯಗಳು ಎಂದು ವಿವರಿಸುತ್ತಾನೆ.

ಅಧ್ಯಾಯ 18: ಪರಮಾತ್ಮನೊಂದಿಗೆ ಐಕ್ಯ
ಫಲದ ಬಯಕೆಯಿಂದ ಮಾಡುವ ಕರ್ಮಗಳನ್ನು ಬಿಡುವುದು ಸಂನ್ಯಾಸ, ಆ ಎಲ್ಲಾ ಕರ್ಮಗಳನ್ನು ಮಾಡಿ ಫಲವನ್ನ ಬಯಸದೇ ಇರುವುದು ತ್ಯಾಗ ಎಂದು ಹೇಳುವ ಕೃಷ್ಣನು, ಕರ್ಮಯೋಗಿಯಾಗಿ ಬದುಕಬೇಕು. ನಿಮ್ಮ ಕೆಲಸವೇ ನಿಮ್ಮನ್ನು ಆತ್ಮದೊಂದಿಗೆ ಜೋಡಿಸುತ್ತದೆ. ಪರಮಾತ್ಮನೊಂದಿಗೆ ಐಕ್ಯವಾಗಲು ದಾರಿ ತೋರುತ್ತದೆ ಎಂದು ವಿವರಿಸುತ್ತಾನೆ.ಇನ್ನೂ ಅನೇಕವಿಷಯಗಳ ಬಗ್ಗೆ ಅರ್ಥಮಾಡಿಕೊಳ್ಳುವುದಕ್ಕೆ ಗೀತೆ ಓದುವ

Category:Spirituality



ProfileImg

Written by Muruli Aldur